Advertisement

The tiger that attacked the farmers was captured

12:53 PM Jul 03, 2022 | Team Udayavani |
ಗುಂಡ್ಲುಪೇಟೆ (ಚಾಮರಾಜನಗರ): ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಲಕ್ಕಿಪುರ ಗ್ರಾಮಕ್ಕೆ ಹೊಂದಿಕೊಂಡ ಜಮೀನೊಂದರಲ್ಲಿ ಇಬ್ಬರು ರೈತರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದ ಸುಮಾರು 10 ವರ್ಷದ ಹೆಣ್ಣು ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಜಿಟಿಜಿಟಿ ಮಳೆ ನಡುವೆಯೂ ಆನೆಗಳ ಸಹಾಯದಿಂದ ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿ ಭಾನುವಾರ ಬೆಳಗ್ಗೆ ಸೆರೆ ಹಿಡಿದಿದ್ದಾರೆ. ಹುಲಿಯು ಶನಿವಾರ ಗೋಪಾಲಪುರ ಗ್ರಾಮದ ಗವಿಯಪ್ಪ ಮತ್ತು ರಾಜಶೇಖರ್ ಹಾಗು ಒಂದು ಹಸುವಿನ ಮೇಲೆ ದಾಳಿ ನಡೆಸಿ ಶಿವಬಸಪ್ಪ ಎಂಬ ರೈತ ಬಾಳೆ ಜಮೀನಿನಲ್ಲಿ ಅಡಗಿ ಕುಳಿತಿತ್ತು. ನಂತರ ಭಾನುವಾರ ಬೆಳಗ್ಗೆ 6 ಗಂಟೆಗೆ ಅರಣ್ಯ ಇಲಾಖೆ ಸಿಬ್ಬಂದಿ ಅಭಿಮನ್ಯು ಮತ್ತು ಶ್ರೀಕಂಠ ಎಂಬ ಎರಡು ಆನೆಗಳ ಮೂಲಕ ಕೂಬಿಂಗ್ ಆರಂಭಿಸಿ, ಸತತ ಮೂರು ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಹುಲಿಗೆ ಅರವಳಿಕೆ ಚುಚ್ಚು ಮದ್ದು ನೀಡುವ ಮೂಲಕ ಸೆರೆ ಹಿಡಿದಿದ್ದಾರೆ.
Advertisement

Udayavani is now on Telegram. Click here to join our channel and stay updated with the latest news.

Next